ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಗೆ ತಾತ್ವಿಕ ಒಪ್ಪಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ

ಬೆಂಗಳೂರು: ಲೋಕಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿರುವಂತೆಯೇ ಕರ್ನಾಟಕ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಲೋಕಸಭೆ ಚುನಾವಣೆಗೆ ಪರಸ್ಪರ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲು ಬಿಜೆಪಿ ಮತ್ತು ಜನತಾದಳ (ಜಾತ್ಯಾತೀಯ) (ಜೆಡಿಎಸ್) ತಾತ್ವಿಕವಾಗಿ ಒಪ್ಪಿಗೊಂಡಿದೆ. ಅದನ್ನು ಅಧಿಕೃತವಾಗಿ  ಇನ್ನಷ್ಟೇ ಪ್ರಕಟಿಸಬೇಕಾಗಿದೆ.

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮೈತ್ರಿ ರಚನೆ ಕುರಿತು ಚರ್ಚೆ ನಡೆಸಿದ್ದರು.

ಕರ್ನಾಟಕದಲ್ಲಿ ತಮಗೆ ಐದು ಲೋಕಸಭಾ ಸ್ಥಾನಗಳನ್ನು ನೀಡುವಂತೆ ದೇವೇಗೌಡ ಕೋರಿದ್ದಾರೆ. ಈ ವಿಷಯದಲ್ಲಿ ಪ್ರಧಾನಮಂತ್ರಿ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿ ದ್ದಾರೆಂದು ಉಭಯ ಪಕ್ಷಗಳ ನೇತಾರರು ತಿಳಿಸಿದ್ದಾರೆ.

೨೦೧೯ರ ಲೋಕಸಭೆ ಚುನಾವಣೆಯಲ್ಲಿ  ಕರ್ನಾಟಕದ ಒಟ್ಟು ೨೮ ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ೨೫ ಗೆದ್ದರೆ, ಬಿಜೆಪಿ ಬೆಂಬಲಿತ ಸುಮಲತಾ ಅಂಬರೀಷ್  ಕೂಡಾ ಗೆದ್ದಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನದಲ್ಲಷ್ಟೇ ಗೆದ್ದು ಅದರಲ್ಲಿ ತೃಪ್ತಿಪಡಬೇಕಾದ ಸ್ಥಿತಿ ಉಂಟಾಗಿತ್ತು. ಜೆಡಿಎಸ್ ಭದ್ರಕೋಟೆಯಾದ ಹಾಸನದಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು.

Leave a Reply

Your email address will not be published. Required fields are marked *

You cannot copy content of this page