ಕರ್ನಾಟಕ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ

0
13

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮತದಾರ ಯಾವುದೇ ರಾಜಕೀಯ ಪಕ್ಷಗಳಿಗೆ ಸ್ಪಷ್ಟಬಹುಮತ ನೀಡದೆ ಅತಂತ್ರ ವಿಧಾನಸಭೆ ನಿರ್ಮಾಣಗೊಂಡು ಸರಕಾರ ರಚನೆಗಾಗಿ ಏಳು ಪಕ್ಷಗಳು ಕಸರತ್ತುಗಳಲ್ಲಿ ತೊಡಗಿರುವಾಗಲೇ ರಾಜ್ಯದ ೨೪ನೇ ಮುಖ್ಯಮಂತ್ರಿ ಯಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯ ಭವನದಲ್ಲಿ ಇಂದು ಬೆಳಿಗ್ಗೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರಿದ್ದಾರೆ.

ರೈತರ ಪ್ರತೀಕವಾಗಿ ಹಸಿರು ಶಾಲು ಹೊದೆಸಿ, ಶ್ವೇತ ವಸ್ತ್ರಧಾರಿಯಾಗಿ ಬಂದು ರೈತರು ಮತ್ತು ದೇವರ ಹೆಸರಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಜು ಭಾಯಿವಾಲಾ ಪ್ರತಿಜ್ಞೆ ಬೋಧಿಸಿದರು. ಪದಗ್ರಹಣದ ವೇಳೆ ಕೇಂದ್ರ ಸಚಿವ ಅನಂತ ಕುಮಾರ್, ಪ್ರಕಾಶ್ ಜಾವಡ್ಕರ್, ಮುರಳೀಧರ ರಾವ್ ಮತ್ತು ಬಿಜೆಪಿಯ ಹಲವು ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಭಾಗವಹಿಸಿದರು. ಪ್ರಮಾಣವಚನದ ಬಳಿಕ ಬಿಜೆಪಿ ಕಾರ್ಯಕರ್ತರಿಂದ ಮೋದಿ, ಮೋದಿ ಎಂದು ಹರ್ಷೋದ್ಘಾರ ಮೊಳಗಿತು. ನೂತನ ಸಿ.ಎಂ.ಗೆ ಹೂಗುಚ್ಛ ನೀಡಿ ರಾಜ್ಯಪಾಲರು ಶುಭ ಕೋರಿದರು. ರಾಮಕೃಷ್ಣ ದೇಗುಲದಲ್ಲಿ ಮೊದಲು ಪೂಜೆ ಸಲ್ಲಿಸಿದ ಬಳಿಕ ರಾಜ್‌ಭವನಕ್ಕೆ ಆಗಮಿಸಿ ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಿ ದರು. ಸದ್ಯಕ್ಕೆ ಯಡಿಯೂರಪ್ಪ ಅವರು ಒಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರು ಮುಖ್ಯಮಂತ್ರಿಯಾಗುತ್ತಿರುವುದು ಇದು ಮೂರನೇ ಬಾರಿಯಾಗಿದೆ. ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಹಿನ್ನೆಲೆಯಲ್ಲಿ ಸರಕಾರ ರಚನೆಗೆ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಕ್ಕೆ ತೆರೆ ಹಾಕಿ ಸರಕಾರ ರಚನೆಗೆ ಅತೀ ದೊಡ್ಡ ಪಕ್ಷವಾದ ಬಿಜೆಪಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದರು. ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ರಾಜ್ಯಪಾಲರು ಹದಿನೈದು ದಿನಗಳ ಸಮಯವಕಾಶ ನೀಡಿದ್ದಾರೆ.

NO COMMENTS

LEAVE A REPLY