ಪ್ಲಸ್ವನ್ ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಬಂಧನ

0
31

ಬದಿಯಡ್ಕ: ಪ್ಲಸ್‌ವನ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಯುವಕನನ್ನು ಪೊಲೀಸರು ಬಂಧಿಸಿ ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ.

ಕುಂಬ್ಡಾಜೆ ನೇರಪ್ಪಾಡಿ ನಿವಾಸಿ ಲೋಕೇಶ್ (೨೫)ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿರುಕುಳಕ್ಕೆಡೆಯಾದ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಯ ವರ್ತನೆಯಲ್ಲಿ ಸಂಶಯ ಕಂಡು ಬಂದ ಹಿನ್ನೆಲೆಯಲ್ಲಿ ಶಾಲೆ ಹಾಗೂ ಚೈಲ್ಡ್‌ಲೈನ್ ಅಧಿಕಾರಿಗಳು ವಿಚಾರಿಸಿದಾಗ ಕಿರುಕುಳಕ್ಕೆಡೆಯಾದ ವಿಷಯ ತಿಳಿದು ಬಂದಿದೆ. ಅನಂತರ ಪೊಲೀಸರಿಗೆ ದೂರು ನೀಡಲಾಗಿದೆ. ಮನೆ ಸಮೀಪದ ರಬ್ಬರ್ ತೋಟಕ್ಕೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ವೈದ್ಯಕೀಯ ತಪಾಸಣೆಯಲ್ಲಿ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿ ದ್ದಾಳೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಲೋಕೇಶ್‌ನನ್ನು ಬಂಧಿಸಿ ಕೇಸು ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

NO COMMENTS

LEAVE A REPLY