ಕಾರಿನಲ್ಲಿ ಸಾಗಿಸುತ್ತಿದ್ದ ತಂಬಾಕು ಉತ್ಪನ್ನ ವಶ: ಇಬ್ಬರ ಸರೆ

0
19

ಕಣ್ಣೂರು: ಕಾರಿನೊಳಗೆ ಗುಪ್ತ ಕಪಾಟು ಮಾಡಿಕೊಂಡು ಅದರೊಳಗೆ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಸಾಗಿಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಆಡಂಬರ ಕಾರು ಹಾಗೂ ಅದರೊಳಗಿದ್ದ ಭಾರೀ ಪ್ರಮಾಣದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ಮುಂಜಾನೆ ಇರಿಟ್ಟಿ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಮಟ್ಟನ್ನೂರು ತಾಮರಶ್ಶೇರಿ ನಿವಾಸಿಗಳಾದ ಮೊಹಮ್ಮದ್ ಅಜ್ಮಲ್(೨೧), ಮಿನ್ಶಾದ್(೨೩) ಎಂಬಿವರು ಬಂಧಿತ ವ್ಯಕ್ತಿಗಳೆಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಅಮಿತ ವೇಗದಲ್ಲಿ ಸಂಚರಿಸುತ್ತಿದ್ದ ಕಾರನ್ನು ಅಬಕಾರಿ ಅಧಿಕಾರಿಗಳು ತಡೆದು ನಿಲ್ಲಿಸಿ ತಪಾಸಣೆಗೈದಾಗ ಅದರೊಳಗೆ ಗುಪ್ತ ಕಪಾಟು ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಅದನ್ನು ಪರಿಶೀಲಿಸಿದಾಗ ವಿವಿಧ ರೀತಿಯ ೧೫,೦೦೦ಕ್ಕಿಂತ ಹೆಚ್ಚು ಪ್ಯಾಕೆಟ್ ತಂಬಾಕು ಉತ್ಪನ್ನಗಳು ಪತ್ತೆಯಾಗಿದೆ. ಬಂಧಿತರನ್ನು ತನಿಖೆಗೊಳಪಡಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

NO COMMENTS

LEAVE A REPLY