ಅಸೌಖ್ಯ ಪೀಡಿತ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
30

ಅಡೂರು: ಪಾರ್ಶ್ವವಾಯು ಪೀಡಿತರಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಅಡೂರು ಬಳಿಯ ಕಾಟಿಕಜೆ ಮಾವಿನಡಿ ನಿವಾಸಿ ಸುಂದರ ನಾಯ್ಕ(೫೨) ಎಂಬವರು ಮೃತ ವ್ಯಕ್ತಿ. ಕೂಲಿ ಕಾರ್ಮಿಕನಾದ ಇವರು ಕೆಲವು ತಿಂಗಳಿನಿಂದ ಪಾರ್ಶ್ವವಾಯು ಪೀಡಿತರಾಗಿದ್ದರೆನ್ನ ಲಾಗಿದೆ. ನಿನ್ನೆ ಮಧ್ಯಾಹ್ನ ಪತ್ನಿ ಹೊರಗೆ ತೆರಳಿದ ಸಂದರ್ಭದಲ್ಲಿ  ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತ್ನಿ ಮನೆಗೆ ತಲುಪಿದಾಗ ಸುಂದರ ನಾಯ್ಕ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ವಿಷಯ ತಿಳಿದು ಊರವರು ತಲುಪಿ ಹಗ್ಗ ತುಂಡರಿಸಿ ಕಾಸರಗೋಡಿನ ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ದಾರಿ ಮಧ್ಯೆ ಸಾವು ಸಂಭವಿಸಿದೆ. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಮೃತರು ಪತ್ನಿ ಲಲಿತ, ಸಹೋದರ ಐತ್ತಪ್ಪ, ಸಹೋದರಿ ಕಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

NO COMMENTS

LEAVE A REPLY