ಕುಂಬಳೆ: ಪೋಕ್ಸೋ ಪ್ರಕರಣದ ಆರೋಪಿಯನ್ನು ಕುಂಬಳೆ ಪೊಲೀಸರು ಸೆರೆ ಹಿಡಿದಿದ್ದಾರೆ. ೧೬ರ ಬಾಲಕಿಗೆ ಲೈಂಗಿಕ ದೌರ್ಜನ್ಯಗೈದ ಪ್ರಕರಣಕ್ಕೆ ಸಂಬಂಧಿಸಿ ನಾಯ್ಕಾಪು ನಿವಾಸಿ ಪ್ರದೋಶ್ (೨೫) ಎಂಬಾತನನ್ನು ಸೆರೆ ಹಿಡಿದಿದ್ದಾರೆ. ಕುಂಬಳೆ ಠಾಣಾ ವ್ಯಾಪ್ತಿಗೊಳಪಟ್ಟ ಬಾಲಕಿಗೆ ಲೈಂಗಿಕ ದೌರ್ಜನ್ಯಗೈದ ಸಂಬಂಧ ಠಾಣೆಯಲ್ಲಿ ಯುವಕನ ವಿರುದ್ಧ ಪೋಕ್ಸೋ ಕೇಸು ದಾಖಲಿಸಲಾಗಿತ್ತು. ನಿನ್ನೆ ಸೆರೆ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಈತನಿಗೆ ರಿಮಾಂಡ್ ವಿಧಿಸಲಾಗಿದೆ.