ಅಭ್ಯರ್ಥಿಗಳೊಂದಿಗೆ ಕನ್ನಡಿಗರ ಮುಖಾಮುಖಿ

0
78

ಕುಂಬಳೆ: ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡು, ಮಂಜೇಶ್ವರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ  ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಕಾಸರಗೋಡಿನ ಕನ್ನಡಿಗರ ಮುಖಾಮುಖಿ ಕಾರ್ಯಕ್ರಮ ಎ. ೩ರಂದು ಅಪರಾಹ್ನ ೨.೩೦ರಿಂದ ಕುಂಬಳೆ ರೈಲು ನಿಲ್ದಾಣ ಪರಿಸರದ ಎಂ.ಎಂ. ಟ್ಯೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲೆಯ ಭಾಷಾ ಅಲ್ಪಸಂಖ್ಯಾತರಾದ ಕನ್ನಡ ವಿದ್ಯಾರ್ಥಿಗಳು, ಕನ್ನಡ ಬಲ್ಲ ಸರಕಾರಿ ನೌಕರರು, ಅಂಗನವಾಡಿ ಶಿಕ್ಷಕಿಯರು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕನ್ನಡ ಬಲ್ಲ ಅಭ್ಯರ್ಥಿಗಳ ಆಯ್ಕೆಗಾಗಿ ಪಿ.ಎಸ್.ಸಿ ನಡೆಸಿದ ಪರೀಕ್ಷಾರ್ಥಿಗಳು, ಕನ್ನಡ ಭಾಷಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY