ಇಂದು ಕಾರ್ಗಿಲ್ ವಿಜಯ ದಿವಸ

0
42

ನವದೆಹಲಿ: ಕಾರ್ಗಿಲ್ ವಿಜಯ ದಿವಸಕ್ಕೆ ಇಂದು ೨೨ ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಕಾರ್ಗಿಲ್ ದಿನವನ್ನು ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಕಾರ್ಗಿಲ್‌ಗೆ ಭೇಟಿ ನೀಡುವರು. ಲಡಾಕ್‌ನ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳುವ ಅವರು ಹುತಾತ್ಮರಿಗೆ ಪುಷ್ಪನಮನ ಸಲ್ಲಿಸುವರು. ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ಗೃಹಸಚಿವ ಅಮಿತ್ ಷಾ, ಸೇನಾ ಅಧಿಕಾರಿಗಳು ಇಂದು  ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ನಮನ ಸಲ್ಲಿಸುವರು. ಕಾರ್ಯಕ್ರಮದ ಅಂಗವಾಗಿ ಭಾರತೀಯ ಸೇನೆ ನಾರ್ದರ್ನ್ ಕಮಾಂಡ್ ೨ ದಿನಗಳ ಮೋಟರ್ ಸೈಕಲ್ ರ‍್ಯಾಲಿ ನಡೆದಿತ್ತು. ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್‌ರಾವತ್ ಅವರು ನಿನ್ನೆ ಲಡಾಖ್‌ನ ದ್ರಾಸ್‌ಗೆ ಭೇಟಿ ನೀಡಿದರು. ೧೯೯೯ ಜುಲೈ ೨೬ರಂದು

ಪಾಕಿಸ್ತಾನದ ಸೇನೆಯನ್ನು ಹಿಮ್ಮೆಟ್ಟಿಸಿದ ಭಾರತದ ಸೈನಿಕರು ವಿಜಯ ಪತಾಕೆ ಹಾರಿಸಿದ್ದರು.

NO COMMENTS

LEAVE A REPLY