ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ: 3 ಅಂತಸ್ತಿನ ಮನೆ ಕುಸಿದು 4 ಮಂದಿ ಸಾವು

0
40

ಅನಂತಪುರ: ಭಾರಿ ಮಳೆ ಮತ್ತು ಭೀಕರ ಪ್ರವಾಹಕ್ಕೆ ತುತ್ತಾಗಿರುವ ಆಂಧ್ರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕದಿರಿ ಪಟ್ಟಣದಲ್ಲಿ ಕಟ್ಟಡವೊಂದು ಕುಸಿದು 4 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕದಿರಿ ಪಟ್ಟಣದಲ್ಲಿ ಈ ದುರಂತ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಇಲ್ಲಿನ ಓಲ್ಡ್ ಚೇರ್ಮನ್ ಸ್ಟ್ರೀಟ್‌ನಲ್ಲಿರುವ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಪರಿಣಾಮ ಮನೆಯಲ್ಲಿದ್ದ ಮೂರು ಮಕ್ಕಳು, ಓರ್ವ ಹಿರಿಯ ಮಹಿಳೆ ಕಟ್ಟಡದ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ

NO COMMENTS

LEAVE A REPLY