ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಮಕ್ಕಳಿಗೆ ಆಗುತ್ತಿರುವ ತೊಂದರೆ ಪರಿಹರಿಸಲು ಕ್ರಮ -ಕರ್ನಾಟಕ ಸಚಿವ ಸುನಿಲ್ ಕುಮಾರ್

0
185

ಬೆಂಗಳೂರು: ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಶಾಲೆಗಳಿಗೆ ಕನ್ನಡ ಗೊತ್ತಿಲ್ಲದ ಶಿಕ್ಷಕರ ನೇಮಕದಿಂದ ಮಕ್ಕಳಿಗೆ ಆಗುತ್ತಿರುವ ತೊಂದರೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವು ದೆಂದು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಅವರು ವಿಧಾನಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಸಲೀಂ ಅಹಮ್ಮದ್ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸುತ್ತಿದ್ದರು. ಕಾಸರಗೋಡು ಕನ್ನಡ ಶಾಲೆಗಳ ಮಕ್ಕಳ ಹಿತ ಕಾಪಾಡಲು ಕರ್ನಾಟಕ ಸರಕಾರ ಬದ್ಧವಾಗಿದೆ. ಈ ಬಗ್ಗೆ ಕೇರಳ ಸರಕಾರದ ಜೊತೆ ಚರ್ಚಿಸಿ ಪರಿಹರಿಸಲಾಗುವುದು ಎಂದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಲೀಂ ಅಹಮ್ಮದ್ ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಪಾಠ ಮಾಡಬೇಕಾಗುತ್ತದೆ. ಆದರೆ ಕೇರಳ ಸರಕಾರ ಕನ್ನಡ ಗೊತ್ತಿಲ್ಲದ ಶಿಕ್ಷಕರನ್ನು ನೇಮಕ ಮಾಡುತ್ತಿದೆ. ಗಡಿ ಪ್ರದೇಶಗಳಲ್ಲಿ ಸಂವಿಧಾನಬದ್ಧ ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ ಇರುವುದ ರಿಂದ ಕನ್ನಡ ಗೊತ್ತಿರುವ ಶಿಕ್ಷಕರನ್ನು ನೇಮಿಸಬೇಕೆಂದು ೨೦೧೬ರಲ್ಲಿ ಕೇರಳ ಹೈಕೋರ್ಟ್ ಆದೇಶಿಸಿದೆ. ಆದರೂ ಕೂಡಾ ಇಲ್ಲಿವರೆಗೆ ಕನ್ನಡ ಶಿಕ್ಷಕರನ್ನು ನೇಮಿಲಿಲ್ಲ ಎಂದರು.

NO COMMENTS

LEAVE A REPLY