ಬೈಕ್ ಗೆ ಕಾರು ಢಿಕ್ಕಿ: ಸವಾರ ಗಾಯ

0
120

ಉಪ್ಪಳ: ಬೈಕ್‌ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಉಪ್ಪಳ ಬಳಿಯ ಹಿದಾಯತ್ ನಗರ ನಿವಾಸಿ ಬೈಕ್ ಸವಾರ ಲತೀಫ್(೩೦) ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ೮ ಗಂಟೆಗೆ ಕುಕ್ಕಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯ ಯುವಕರು ಕೂಡಲೇ ಉಪ್ಪಳ ಖಾಸಗಿ ಆಸ್ಪತ್ರೆಗೆ ಸಾಗಿಸಿದ ಬಳಿಕ ಮಂಗಳೂರಿಗೆ ಕೊಂಡೊಯ್ಯ ಲಾಗಿದೆ. ಕುಂಬಳೆ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ನಡೆಸಿದ್ದಾರೆ.

NO COMMENTS

LEAVE A REPLY