ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

0
443

ಕಾಸರಗೋಡು: ವ್ಯಕ್ತಿಯೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಿನ್ನೆ ನಡೆದಿದೆ.  ಮೃತ ವ್ಯಕ್ತಿಗೆ ಸುಮಾರು ೪೫ ವರ್ಷ ಪ್ರಾಯ ತೋರುತ್ತಿದ್ದು, ಅವರ ಗುರುತು ಹಚ್ಚಲು ಈತನಕ ಸಾಧ್ಯವಾಗಿಲ್ಲ. ಮೃತವ್ಯಕ್ತಿ ಅಂಗಿ ಮತ್ತು ಧೋತಿ ಧರಿಸಿದ್ದಾನೆ.  ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲು ಗಾಡಿ ಢಿಕ್ಕಿ ಹೊಡೆದು ಈ ವ್ಯಕ್ತಿ ಸಾವವನ್ನಪ್ಪಿ ರುವುದಾಗಿ ಶಂಕಿಸಲಾಗಿದೆ. ಸುದ್ದಿ ತಿಳಿದ ಕಾಸರಗೋಡು ಪೊಲೀಸ್ ಠಾಣೆಯ ಎಸ್.ಐ ಕೆ. ಆರ್. ಅಂಬಾಡಿಯವರ ನೇತೃತ್ವದ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ ಬಳಿಕ ಮೃತದೇಹವನ್ನು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

NO COMMENTS

LEAVE A REPLY