ಅಂಗಡಿಮೊಗರಿನಲ್ಲಿ ಮಣ್ಣು ಕುಸಿತ: ಸ್ಥಳೀಯರಲ್ಲಿ ಆತಂಕ
ಪುತ್ತಿಗೆ: ಧಾರಾಕಾರ ಮಳೆಗೆ ಅಂಗಡಿಮೊಗರಿನಲ್ಲಿ ರಸ್ತೆಗೆ ಮಣ್ಣು ಕುಸಿದು ಬಿದ್ದಿದೆ. ಶಾಲೆ ಸಮೀಪದಲ್ಲಿರುವ ಗುಡ್ಡೆಯ ಮಣ್ಣು ರಸ್ತೆಗೆ ಬಿದ್ದಿದ್ದು, ಇದರಿಂದ ಶಾಲಾ ಮಕ್ಕಳಲ್ಲಿ ಹಾಗೂ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರಸ್ತುತ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಆದರೆ ಮಳೆ ತೀವ್ರಗೊಂಡರೆ ಮುಂದಿನ ದಿನಗಳಲ್ಲಿ ಗುಡ್ಡೆಯ ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.