ಅಂಗಡಿಯಿಂದ 3018 ಪ್ಯಾಕೆಟ್ ತಂಬಾಕು ಉತ್ಪನ್ನ ವಶ
ಕಾಸರಗೋಡು: ಚೆರ್ಕಳದಲ್ಲಿ ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಕಾರ್ಯಾ ಚರಣೆಯಲ್ಲಿ ಅಂಗಡಿ ಯೊಂದರಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ 3018 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಚೆರ್ಕಳದ ವ್ಯಾಪಾರಿ ಮೊಯ್ದೀನ್ ಕುಂಞಿ (45) ಎಂಬಾತನ ವಿರುದ್ಧ ಕೇಸು ದಾಖಲಿ ಸಲಾಗಿದೆ. ನಾಲ್ಕು ಪ್ಲಾಸ್ಟಿಕ್ ಚೀಲಗಳ ಲ್ಲಾಗಿ ಈ ತಂಬಾಕು ಉತ್ಪನ್ನಗಳನ್ನು ಅಂಗಡಿಯಲ್ಲಿ ತುಂಬಿಸಿಡ ಲಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ.