ಅಗಲ್ಪಾಡಿಯಲ್ಲಿ ಕಾರ್ಮಿಕ ಕುಟುಂಬ ಸಂಗಮ ನಾಳೆ

ಅಗಲ್ಪಾಡಿ: ಭಾರತೀಯ ಮಜ್ದೂರ್ ಸಂಘ ಕುಂಬ್ಡಾಜೆ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಜಯನಗರ, ಕುರುಮುಜ್ಜಿಕಟ್ಟೆ, ಮವ್ವಾರು ಯೂನಿಟ್ ಗಳ ನಿರ್ಮಾಣ ಕಾರ್ಮಿಕರ, ಕೃಷಿ ಕಾರ್ಮಿಕರ, ಟೈಲರಿಂಗ್ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ‘ಕುಟುಂಬ ಸಂಗಮ’ ನಾಳೆ ಬೆಳಿಗ್ಗೆ 10 ಅಗಲ್ಪಾಡಿ ಜಯನಗರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಪಾಂಚಜನ್ಯ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ. ಮೇಲೆ ತಿಳಿಸಿದ ಯೂನಿಟ್‌ಗೊಳಪಟ್ಟ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ಪ್ಲಸ್ ಟು ವಿಭಾಗಗಳಲ್ಲಿ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದ ಕಾರ್ಮಿಕ ಸದಸ್ಯರ ಮಕ್ಕಳನ್ನು ಅಭಿನಂದಿಸುವ ಕಾರ್ಯಕ್ರಮ ಹಾಗೂ ವಿಭಿನ್ನ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಕಾರ್ಯಕ್ರಮ ಇದೇ ವೇಳೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಬಂಧಪಟ್ಟವರು ವಿನಂತಿಸಿದ್ದಾರೆ.

RELATED NEWS

You cannot copy contents of this page