ಅನಧಿಕೃತ ಮದ್ಯ ಮಾರಾಟ: ಆಟೋ ಚಾಲಕಿ ಸೆರೆ
ಬಂದಡ್ಕ: ಕುಂಡಂಗುಳಿ ಪರಿಸರದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆಟೋ ಚಾಲಕಿಯನ್ನು ಸೆರೆ ಹಿಡಿಯಲಾಗಿದೆ. ಇಲ್ಲಿನ ಶ್ರೀಕಲಾ ಕೆ.(44) ಬಂಧಿತ ಆರೋಪಿಯಾಗಿದ್ದಾಳೆ. ಈಕೆಯ ಆಟೋರಿಕ್ಷಾದಿಂದ ಕೇರಳ ನಿರ್ಮಿತ ವಿದೇಶ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಬಂದಡ್ಕ ರೇಂಜ್ ಅಬಕಾರಿ ಇನ್ಸ್‌ಪೆಕ್ಟರ್ ಜಯರಾಜನ್ ಟಿ.ಯು. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಿವಿಧ ಕಡೆಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟದ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.