ಆಟೋಚಾಲಕ ಕುಸಿದು ಬಿದ್ದು ಮೃತ್ಯು

ಕಾಸರಗೋಡು: ಆಟೋಚಾಲಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕೇಳುಗುಡ್ಡೆಯಲ್ಲಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ ಹರೀಶ್ ರಾವ್ (48) ಮೃತಪಟ್ಟವರು. ಶನಿವಾರ ರಾತ್ರಿ ಇವರು ಕ್ವಾರ್ಟರ್ಸ್‌ನಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅವಿವಾಹಿತರಾದ ಇವರ ತಂದೆ ವಿಠಲ ರಾವ್ ಈ ಹಿಂದೆ ನಿಧನರಾಗಿದ್ದಾರೆ. ತಾಯಿ ವೀಣಾ ರಾವ್ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page