ಉದ್ಯಮಿ, ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ವಾಹನ ಕೊಡುಗೆ

ಮೀಯಪದವು: ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿಗಳಾದ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಗೆ ವ್ಯಾನ್ ಕೊಡುಗೆ ನೀಡಿದರು. ಶಾಲೆಯು ಶತಮಾನೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಸದಾಶಿವ ಕೆ. ಶೆಟ್ಟಿ ಕುಳೂರು ಹಾಗೂ ರಘುರಾಮ್ ಕೆ. ಶೆಟ್ಟಿ ಕುಳೂರು ಶಾಲಾ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ. ಇದರ ಹಸ್ತಾಂತರ ಕಾರ್ಯಕ್ರಮ ಶಾಲೆಯಲ್ಲಿ ನಡೆದಿದ್ದು, ಲೀಲಾವತಿ ಪಕೀರ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಮಾಲತಿಯವರಿಗೆ ವಾಹನ ಕೀಲಿಕೈ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮೀಂಜ ಪಂಚಾಯತ್ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ, ವಾರ್ಡ್ ಪ್ರತಿನಿಧಿ ಜನಾರ್ದನ ಪೂಜಾರಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಮಹಮ್ಮದ್ ಹಾಜಿ ಕಂಚಿಲ, ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ, ಸಹೋದರರಾದ ಅಧ್ಯಕ್ಷ ಸತೀಶ್ ಎಲಿಯಾಣ, ಶತಮಾನೋತ್ಸವ ಅತಿಥಿ ಸತ್ಕಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಶತಮಾನೋತ್ಸವದ ಸನ್ಮಾನ ಸಮಿತಿ ಅಧ್ಯಕ್ಷ ನಾರಾಯಣ ನಾಕ್ ನಡುಹಿತ್ಲು, ಶತಮಾನೋತ್ಸವ ಸಮಿತಿ ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಜಯರಾಜ ಶೆಟ್ಟಿ ಚಾರ್ಲ, ಕಾರ್ಯಕ್ರಮ ಸಮಿತಿ ಅಧ್ಯಕ್ಷ ಹರಿರಾಮ ಕುಳೂರು, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಅಬ್ದುಲ್ ಮಜೀದ್, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಚರಿತ ಚಿನಾಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಚೈತ್ರ ಕಲ್ಕಾರ್, ಶತಮಾನೋತ್ಸವ ಸಮಿತಿ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

RELATED NEWS

You cannot copy contents of this page