ಕಾಸರಗೋಡು: ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಮಾನಂತವಾಡಿ ತೋಲ್ ಪಟ್ಟೆ ತಪಾಸಣಾ ಕೇಂದ್ರದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಟು ಲಕ್ಷ ರೂ. ಮೌಲ್ಯದ 265 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಹೊಸದುರ್ಗ ಪುಲ್ಲೂರು ಪಾರವಳ ವೀಟಿಲ್‌ನ ಮೊಹಮ್ಮದ್ ಸಾಬೀರ್ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಂಚರಿಸುತ್ತಿದ್ದ ವಾಹನವನ್ನು ಪೊಲೀ ಸರು ವಶಕ್ಕೆ ತೆಗೆದುಕೊಂಡಿದ್ದಾರೆ.
