ಎಡನಾಡು ಸೇವಾ ಸಹಕಾರಿ ಬ್ಯಾಂಕ್ ಚುನಾವಣೆ: ಸಹಕಾರ ಭಾರತಿ ಜಯಭೇರಿ
ಪುತ್ತಿಗೆ: ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಪ್ರಚಂಡ ಗೆಲುವು ಸಾಧಿಸಿದ್ದಾರೆ. ಒಟ್ಟು 13 ಮಂದಿ ನಿರ್ದೇಶಕರ ಪೈಕಿ ವಿವಿಧ ಮೀಸಲು ವಿಭಾಗಗಳ ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ. ಸಾಮಾನ್ಯ ವಿಭಾಗದ ಏಳು ಮಂದಿ ನಿರ್ದೇಶಕರ ಆಯ್ಕೆಗೆ ಓರ್ವ ಸ್ವತಂತ್ರ ಅಭ್ಯರ್ಥಿ ಸ್ಪರ್ಧಿಸಿ ಕೇವಲ 73 ಮತ ಪಡೆದಿದ್ದಾರೆ. ಸಹಕಾರ ಭಾರತಿ ಅಭ್ಯರ್ಥಿಗಳು ೬೮೫ಕ್ಕೂ ಹೆಚ್ಚು ಮತ ಪಡೆದು ಗೆಲುವು ಸಾಧಿಸಿದ್ದಾರೆ. ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಸಹಕಾರ ಭಾರತಿ ಜಿಲ್ಲಾ ಸಂಘಟನಾ ಪ್ರಮುಖ್ ಅಶೋಕ್ ಬಾಡೂರು, ಬ್ಯಾಂಕ್‌ನ ಹಾಲಿ ಅಧ್ಯಕ್ಷ ಜಯಂತ ಪಾಟಾಳಿ, ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಕುಮಾರ್, ಬಿಜೆಪಿ ಪುತ್ತಿಗೆ ಪಂ. ಅಧ್ಯಕ್ಷ ಪದ್ಮನಾಭ ಆಚಾರ್ಯ, ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷ ಪದ್ಮರಾಜ ಪಟ್ಟಾಜೆ, ಮಂಜೇಶ್ವರ ತಾಲೂಕು ಸಮಿತಿ ಅಧ್ಯಕ್ಷ ಶಂನಾ ಖಂಡಿಗೆ, ಕಾರ್ಯದರ್ಶಿ ಕೃಷ್ಣಮೂರ್ತಿ ನೂಜಿ ಮೊದಲಾದವರು ಅಭಿನಂದನೆ ಸಲ್ಲಿಸಿದ್ದಾರೆ.