ಎರಡೂವರೆ ವರ್ಷದ ಬಾಲಕಿಗೆ ಕಿರುಗುಳ ನೀಡಲೆತ್ನ: ಆರೋಪಿ ಸೆರೆ

ಕಾಸರಗೋಡು: ಕಾಸರಗೋಡು ಪೊಲೀಸ್ ಠಾಣೆಗೊಳಪಟ್ಟ ಪ್ರದೇಶದ ಎರಡೂವರೆ ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ  ಆ ಬಾಲಕಿಯ ಸಂಬಂಧಿಕನಾದ ೫೦ ವರ್ಷದ ಆರೋಪಿಯನ್ನು ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನವಂಬರ್ ೨೦ರಂದು ಆರೋಪಿ ಬಾಲಕಿಯ ಮನೆಯಲ್ಲಿ ಆಕೆಗೆ ಕಿರುಕುಳ ನೀಡಲೆತ್ನಿಸಿರುವುದಾಗಿ ಆರೋಪಿಸಿ ಬಾಲಕಿಯ ತಾಯಿ ಪೊಲೀಸರಿಗೆ ದೂರು  ನೀಡಿದ್ದರು. ಅದರಂತೆ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You cannot copy contents of this page