ಏತಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಾಳೆ

ಬೆಳಿಂಜ: ಏತಡ್ಕ ಶ್ರೀ ಸದಾಶಿವ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಳೆ ಬೆಳಿಗ್ಗೆ  8.48 ರ ಶುಭ ಮುಹೂರ್ತದಲ್ಲಿ ನಡೆಯಲಿದೆ. ಇತರಂಗವಾಗಿ ಬೆಳಿಗ್ಗೆ 5 ಗಂಟೆಯಿಂದ 108 ತೆಂಗಿನಕಾಯಿ ಗಣಪತಿ ಹೋಮ, ಪ್ರತಿಷ್ಠಾಪಾಣಿ, ದೇವರ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮಧ್ಯಾಹ್ನ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಗಮನ, ಪೂರ್ಣಕುಂಭ ಸ್ವಾಗತ, ಶೋಭಾಯಾತ್ರೆ, ಬಳಿಕ ಧಾರ್ಮಿಕ ಸಭೆಯಲ್ಲಿ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಉಪಸ್ಥಿತರಿರುವರು. ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಮುಖ್ಯ ಅತಿಥಿಯಾಗಿ ಪಾಲೊಳ್ಳುವರು. ವೇ|ಮೂ| ಶಿವಶಂಕರ ಭಟ್ ಪಳ್ಳತ್ತಡ್ಕ, ವಾಸ್ತುತಜ್ಞ ಕೆ.ಎನ್. ಭಟ್, ಅರ್ಚಕ ರಾಘವೇಂದ್ರ ಉಪಾಧ್ಯಾಯ ಉಪಸ್ಥಿತರಿರುವರು. ಭಕ್ತಿಸಂಗೀತ, ಸಾಮೂಹಿಕ ರುದ್ರ ಪಾರಾಯಣ, ಶಾಸ್ತ್ರೀಯ ಸಂಗೀತ, ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ನಿನ್ನೆ ವಿವಿಧ ವೈದಿಕ ಕಾರ್ಯಕ್ರಮ ಜರಗಿದ್ದು, ವಿವಿಧ ತಂಡಗಳಿಂದ ಭಜನೆ, ಯಕ್ಷಗಾನ ತಾಳಮದ್ದಳೆ, ದಾಸ ಸಂಕೀರ್ತನೆ, ಯಕ್ಷಗಾನ ಬಯಲಾಟ, ಭರತನಾಟ್ಯ ಪ್ರದರ್ಶನ ಜರಗಿತು.

You cannot copy contents of this page