ಒಗಟುಗಳು ಬೌದ್ಧಿಕ ಜೀವಸತ್ವ- ವಿರಾಜ್ ಅಡೂರು

ವಿಟ್ಲ : ಒಗಟುಗಳು ಬುದ್ಧಿಯನ್ನು ಮಸೆಯುತ್ತವೆ. ಒಗಟಿಗೆ ಉತ್ತರ ಶೋಧಿಸುವ ಕಾರಣ ಏಕಾಗ್ರತೆಯೂ ಬಲವಾಗುತ್ತದೆ. ಮಾತಿನ ಕಟ್ಟೆಗಳಲ್ಲಿ ನಮ್ಮ ಹಿರಿಯರು ಮನರಂಜನೆಗಳಿ ಗಾಗಿ ಒಗಟುಗಳನ್ನು ರಚಿಸಿ, ಸ್ಪರ್ಧಾತ್ಮಕ ಮನೋಭಾವದಲ್ಲಿ ಉತ್ತರ ಕಂಡುಕೊಳ್ಳುತ್ತಿದ್ದರು ಎಂದು ವ್ಯಂಗ್ಯಚಿತ್ರಕಾರ ವಿರಾಜ್ ಅಡೂರು ಹೇಳಿದರು. ವಿಟ್ಲದ ಚಂದಳಿಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಹಿರಿಯ ಕವಿ ಭಾಸ್ಕರ ಆಡ್ವಳ ಅವರ ‘ಜೀವಸತ್ವ’ ಒಗಟಿನ ಸಂಕಲನವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನ ಮಕ್ಕಳ ಕಲಾಲೋಕ ಅಧ್ಯಕ್ಷ ರಮೇಶ ಎಂ ಬಾಯಾರು ಅಧ್ಯಕ್ಷತೆ ವಹಿಸಿದ್ದರು. ಕೃತಿಕಾರರಾದ ಭಾಸ್ಕರ ಆಡ್ವಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಕುಳಾಲು ಸ್ವಾಗತಿಸಿದರು. ಶಿಕ್ಷಕ ವೆಂಕಟೇಶ್ವರ ಭಟ್ ವಂದಿಸಿದರು. ಶಿಕ್ಷಕಿ ರೇಶ್ಮಾ ಲೂಯಿಸ್ ನಿರೂಪಿಸಿದರು. ಶಾಲೆಯ ಮಕ್ಕಳು ಪಾಲ್ಗೊಂಡರು.

You cannot copy contents of this page