ಬದಿಯಡ್ಕ: ಕಾರಿನಲ್ಲಿ ಸಾಗಿಸುತ್ತಿದ್ದ ೧೩೮೦ ಪ್ಯಾಕೆಟ್ ತಂಬಾಕು ಉತ್ಪನ್ನಗಳ ಸಹಿತ ಓರ್ವನನ್ನು ಬದಿಯಡ್ಕ ಪೊಲೀಸರು ಸೆರೆ ಹಿಡಿದಿದ್ದಾರೆ. ವಾಣಿನಗರ ನಿವಾಸಿ ಉದಯಶಂಕರ ಭಟ್ (೫೧) ಬಂಧಿತ ವ್ಯಕ್ತಿಯೆಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂಜೆ ಸ್ವರ್ಗದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆಗಮಿಸಿದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ ನಿಷೇಧಿತ ತಂಬಾಕು ಉತ್ಪನ್ನಗಳು ಪತ್ತೆಯಾಗಿವೆ.
