ಕಾರ್ಗಿಲ್‌ನಲ್ಲಿ ಭೀಕರ ಸ್ಫೋಟ:೩ ಸಾವು, ೧೧ ಮಂದಿ ಗಂಭೀರ

ಲೇಹ್: ಜಮ್ಮು-ಕಾಶ್ಮೀರದ ಕಾರ್ಗಿಲ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಇದರಲ್ಲಿ ಮೂವರು ಸಾವ ನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಹನ್ನೊಂದು ಮಂದಿ ಗಂಭೀರ ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಗಿಲ್ ಜಿಲ್ಲೆಯ ದ್ರಾಸ್‌ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಗಿಲ್ ಜಿಲ್ಲೆಯ ದ್ರಾಸ್‌ನಲ್ಲಿ ರುವ ಕಬಡಿನಲ್ಲಾ ಪ್ರದೇಶದಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಶಂಕಾಸ್ಪದ ರೀತಿಯಲ್ಲಿ ನಿನ್ನೆ ರಾತ್ರಿ ಈ ಸ್ಫೋಟ ನಡೆದಿದೆ. ಗುಜರಿ ಅಂಗಡಿಯಲ್ಲಿ ಅನು ಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಈ ಬಗ್ಗೆ  ಸಮಗ್ರ ತನಿಖೆ ನಡೆಸಲಾಗುತ್ತಿದೆಯೆಂದು ಕಾರ್ಗಿಲ್ ಪೊಲೀಸ್ ಉಪ ಆಯುಕ್ತ ಶ್ರೀಕಾಂತ್ ಬಾಳಾ ಸಾಹೇಬ್ ಸುಸೆ ಅವರು ತಿಳಿಸಿದ್ದಾರೆ. ಇದರಲ್ಲಿ ಉಗ್ರಗಾಮಿಗಳ ಕೈವಾಡವಿದೆಯೇ ಎಂಬ ಬಗ್ಗೆಯೂ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page