ಕಾರ್ಮಾರು ಕ್ಷೇತ್ರ ಬ್ರಹ್ಮಕಲಶೋತ್ಸವ: ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ, ಸನ್ಮಾನ
ಮಾನ್ಯ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರ ಮಗಳೊಂದಿಗೆ ಜರಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ನಿನ್ನೆ ಮಧ್ಯಾಹ್ನ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ‘ಕರ್ಣಾರ್ಜುನ ಕಾಳಗ’ ನಡೆಯಿತು. ಸಂಜೆ ಯಕ್ಷಮಿತ್ರರು ಮಾನ್ಯದ ಸೇವಾ ರೂಪವಾಗಿ ಪಾವಂಜೆ ಮೇಳದವರಿಂದ ‘ಭಸ್ಮಾಸುರ ನರಕಾಸುರ ಕುಚೇಲ-ಕೌಂಡ್ಲಿಕ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ಇದೇ ವೇದಿಕೆಯಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಪಾವಂಜೆ ಮೇಳದ ವ್ಯವಸ್ಥಾಪಕ, ಭಾಗವತ , ಪಟ್ಲ ಫೌಂಡೇಶನ್ ಮಂಗಳೂರು ಇದರ ಸ್ಥಾಪಕರೂ ಆದ ಪಟ್ಲ ಸತೀಶ್ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಶ್ರೀಕೃಷ್ಣಮೂರ್ತಿ ಪುದುಕೋಳಿ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ವೆಂಕಟೇಶ್ವರ ಭಟ್ ಮೈಸೂರು ಉಪಸ್ಥಿತರಿದ್ದರು. ಸಂತೋಷ್ ಕುಮಾರ್ ಎಸ್ ಅವರಿಗೆ ಸ್ಮರಣಿಕೆ ನೀಡಿದರು. ಸಭೆಯಲ್ಲಿ ಮಹೇಶ್ ವಳಕ್ಕುಂಜ, ನರಸಿಂಹ ಭಟ್ ಕಾರ್ಮಾರು, ಸುಂದರ ಶೆಟ್ಟಿ ಕೊಲ್ಲಂಗಾನ, ರಾಮ ಕಾರ್ಮಾರು ಮೊದಲಾದವರು ಉಪಸ್ಥಿತರಿದ್ದರು.