ಕಾರ್ಮಾರು ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಾಳೆ

ಮಾನ್ಯ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಳೆ  1008  ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಮೈಸೂರು ಯಧುವೀರ್ ಕೃಷ್ಣದತ್ತ ಒಡೆಯರ್ ಆಗಮಿಸುವರು.

ಇಂದು ಬೆಳಿಗ್ಗೆ ಗಣಪತಿ ಹೋಮ, ಶಾಂತಿ ಹೋಮ ಮೊದಲಾದ ವೈದಿಕ ಕಾರ್ಯಕ್ರಮಗಳು ಜರಗಿದ್ದು, ರಾತ್ರಿ ಪರಿಕಲಶ ಪೂಜೆ ಸಹಿತ ವಿವಿಧ ಕಾರ್ಯಕ್ರಮಗಳು ಜರಗಲಿದೆ. ಅಪರಾಹ್ನ 3.30ಕ್ಕೆ ವಿದುಷಿ ಸರಸ್ವತಿಕೃಷ್ಣನ್ ಬೇಳ ಇವರಿಂದ ಶಾಸ್ತ್ರೀಯ ಸಂಗೀತ, ಸಂಜೆ 5 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಉಡುಪಿ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಉದ್ಯಮಿ ಬಿ. ವಸಂತ ಪೈ ಬದಿಯಡ್ಕ ಉದ್ಘಾಟಿಸುವರು. ಉದ್ಯಮಿ ಸುಬ್ರಹ್ಮಣ್ಯ ಭಟ್ ಕಾಟಿಪಳ್ಳ ಅಧ್ಯಕ್ಷತೆ ವಹಿಸುವರು.  ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರಿಂದ ಶ್ರೀರಾಮ ಪುನರಾಗಮನ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ.

RELATED NEWS

You cannot copy contents of this page