ಕಾರ್ಮಾರು: ಬ್ರಹ್ಮಕಲಶೋತ್ಸವ ವಾಹನ ಪ್ರಚಾರಕ್ಕೆ ಚಾಲನೆ
ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ ೧ರಿಂದ ಆರಂಭಗೊಳ್ಳಲಿದ್ದು, ಇದರ ಪ್ರಚಾರಾರ್ಥ ಹಮ್ಮಿಕೊಂಡ ವಾಹನ ಸಂಚಾರಕ್ಕೆ ನಿನ್ನೆ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಸುಂದರ ಶೆಟ್ಟಿ ಕೊಲ್ಲಂಗಾನ, ಪ್ರಚಾರ ಸಮಿತಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸರಳಿ ಅವರಿಗೆ ಧ್ವಜ ಹಸ್ತಾಂತರಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಪುದುಕೋಳಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಉಪಾಧ್ಯಕ್ಷ ಶ್ಯಾಮ್ ಪ್ರಸಾದ್ ಮೇಗಿನಡ್ಕ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಮ ಕೆ. ಕಾರ್ಮಾರು, ಪ್ರಚಾರ ಸಮಿತಿ ಸಂಚಾಲಕ ವಿಜಯ ಕುಮಾರ್ ಮಾನ್ಯ ಪಾಲ್ಗೊಂಡರು. ಇದೇ ವೇಳೆ ಬ್ರಹ್ಮಕಲಶೋತ್ಸವಕ್ಕಾಗಿ ಮೈಸೂರಿನಿಂದ ಜ್ಯೋತಿಷಿ ವೆಂಕಟೇಶ್ವರ ಭಟ್ ಕುಂಜಾರು ಕಳುಹಿಸಿಕೊಟ್ಟ ದವಸಧಾನ್ಯ ಹಾಗೂ ತರಕಾರಿಗಳನ್ನು ಸ್ವೀಕರಿಸಲಾಯಿತು.