ಕುಟುಂಬ ಕ್ಷೇತ್ರಕ್ಕೆ ತೆರಳಿದಾಗ ಮನೆಯೊಡೆಯ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಉಪ್ಪಳ: ಕುಟುಂಬ ಸದಸ್ಯರು ಕ್ಷೇತ್ರ ದರ್ಶನಕ್ಕೆ ತೆರಳಿದ ಸಂದರ್ಭದಲ್ಲಿ ಮನೆ ಯೊಡೆಯ  ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಡ್ಲಮೊಗರು ತಪ್ಪಾಡಿ ನಿವಾಸಿ ದಿ| ಪೂವಪ್ಪ ಪೂಜಾರಿ ಎಂಬವರ ಪುತ್ರ ರಾಜೀವ (50) ಮೃತಪಟ್ಟ ವ್ಯಕ್ತಿ. ನಿನ್ನೆ ಬೆಳಿಗ್ಗೆ ಪತ್ನಿ ಹಾಗೂ ಮಕ್ಕಳು ಸಮೀಪದ ಕ್ಷೇತ್ರಕ್ಕೆ ತೆರಳಿದ್ದರು. ಸಂಜೆ ಮರಳಿ ಬಂದಾಗ ರಾಜೀವ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಮಂಗ ಲ್ಪಾಡಿಯ ಆಸ್ಪತ್ರೆಗೆ ತಲುಪಿದರೂ ಜೀವ ರಕ್ಷಿಸಲಾಗಲಿಲ್ಲ ವೆಂದು ತಿಳಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗ ಲ್ಪಾಡಿ ತಾಲೂಕು ಆಸ್ಪತ್ರೆಗೆ ತಲುಪಿಸಲಾಗಿದೆ.

ಮೃತರು ತಾಯಿ, ಪತ್ನಿ ಮಾಲತಿ, ಮಕ್ಕಳಾದ ಚೇತನ್, ದಿನಾಶ್, ಸಹೋದರ-ಸಹೋದರಿಯರ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

You cannot copy contents of this page