ಕುಳೂರು ಶಾಲಾ ಕಟ್ಟಡಕ್ಕೆ ಸಿಡಿಲೆರಗಿ ವಿದ್ಯುತ್ ಉಪಕರಣಗಳಿಗೆ ಹಾನಿ
ಮಂಜೇಶ್ವರ : ಸಿಡಿಲು ಬಡಿದು ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ನಿನ್ನೆ ಬೆಳಿಗ್ಗೆ ಸಿಡಿಲು ಬಡಿದಿದೆ. ಇದೇ ಸಂದರ್ಭದಲ್ಲಿ ಮಕ್ಕಳು ಶಾಲೆಯಲ್ಲಿದ್ದರೂ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಮೀಂಜ ಪಂಚಾಯತ್ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ, ಕ್ಷೇಮ ಸ್ಥಾಯೀ ಸಮಿತಿ ಅಧ್ಯಕ್ಷ ಬಾಬು ಸಿ. ಕುಳೂರು, ವಾರ್ಡ್ ಪ್ರತಿನಿದಿs ಜನಾರ್ಧನ ಪೂಜಾರಿ ಕುಳೂರು, ಸೆಕ್ರೆಟರಿ ನಾರಾಯಣ, ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ, ಮಂಜೇಶ್ವರ ಉಪಜಿಲ್ಲಾ ಪ್ರಭಾರ ವಿದ್ಯಾಧಿಕಾರಿ ಜಿತೇಂದ್ರ ಜಿ.ಎಚ್, ಎಂ.ಡಿ.ಎA. ಅಧಿಕಾರಿ ಪ್ರದೀಪ್, ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಭೇಟಿ ನೀಡಿ ಪರಿಶೀಲಿಸಿದರು.