ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ, ಕನ್ನಡ ಸಂಸ್ಕೃತಿ ಉತ್ಸವ ನಾಳೆ

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿ ವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇವುಗಳ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ನಾಳೆ ಸೀತಾಂಗೋಳಿ ಎಚ್‌ಎಎಲ್ ಸಮೀಪ ಅಲಯನ್ಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಶೋಭಾಯಾತ್ರೆ ನಡೆಯಲಿದ್ದು, ಬೇಳ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಫಾ| ಸ್ಟ್ಯಾನಿ ಪೆರೇರಾ ಚಾಲನೆ ನೀಡುವರು. ಪುತ್ತಿಗೆ ಪಂ. ಅಧ್ಯಕ್ಷ ಸುಬ್ಬಣ್ಣ ಆಳ್ವ ಅಧ್ಯಕ್ಷತೆ ವಹಿಸುವರು. 9.30ರಿಂದ ಡಾ. ಕೆ.ಎನ್. ನಾಗೇಶ್ ಮತ್ತು ಬಳಗ ಬೆಂಗಳೂರು ಇವರಿಂದ ಸುಗಮ ಸಂಗೀತ, 10 ಗಂಟೆಗೆ ಸಾಂಸ್ಕೃ ತಿಕ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ವಿಧಾನಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಉದ್ಘಾಟಿಸುವರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಆಶೀರ್ವಚನ ನೀಡುವರು. ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಕೆ. ಶೆಟ್ಟಿ ಕುತ್ತಿಕ್ಕಾರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿ ವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಪ್ರಾಸ್ತಾವಿಕ ಭಾಷಣ ಮಾಡುವರು.

ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಉದ್ಯಮಿಗಳಾದ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಡಾ. ರೋಹನ್ ಮೊಂತೇರೊ ಎಂಬಿವರನ್ನು ಕರ್ನಾಟಕ ರಾಜ್ಯ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸನ್ಮಾನಿಸಲಿದ್ದಾರೆ. ಕರ್ನಾಟಕ ಸಚಿವ ಎನ್. ಚಲುವರಾಯ ಸ್ವಾಮಿ ದತ್ತಿ ಪ್ರಶಸ್ತಿ ಪ್ರದಾನ ಮಾಡುವರು. ಪತ್ರಕರ್ತರಾದ ಗಣೇಶ್ ಕಾಸರಗೋಡು, ಗಣೇಶ್ ಕೆ. ಕಾಸರಗೋಡು, ಭಾಸ್ಕರ ಕೆ. ಕಾಸರ ಗೋಡು, ಅಜಿತ್ ಸ್ವರ್ಗ ಸಹಿತ ಹಲ ವರು ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಪಿಂಚಣಿ ಯೋಜನೆಗೆ ಚಾಲನೆ ನೀಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಗಡಿನಾಡ ಸಾಧಕರನ್ನು ಸನ್ಮಾನಿಸುವರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯಿಷಾ ಖಾನಂ ಪತ್ರಕರ್ತರ ಗುರುತುಚೀಟಿ ವಿತರಿಸುವರು. ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ಶಾಸಕರಾದ ಎನ್.ಎ. ನೆಲ್ಲಿಕುನ್ನು, ಸಿ.ಎಚ್. ಕುಂಞಂಬು, ಎಕೆಎಂ ಅಶ್ರಫ್, ಜಿಲ್ಲಾ ಪಂ. ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಪ್ರಾರ್ಥನಾ ವರ್ಲ್ಡ್ ಸ್ಕೂಲ್ ಬೆಂಗಳೂರು ಇದರ ಅಧ್ಯಕ್ಷ ಕರ್ಣ ಬೆಳೆಗೆರೆ ಮುಖ್ಯ ಅತಿಥಿಗಳಾಗಿರುವರು. ಹಲವರು ಗಣ್ಯರು ಉಪಸ್ಥಿತರಿರುವರು. ಮಧ್ಯಾಹ್ನ ಗಂಟೆ ೧ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

RELATED NEWS

You cannot copy contents of this page