ಖಾಯಂ ಶಿಕ್ಷಕರ ನೇಮಕಾತಿ ಆಗ್ರಹಿಸಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪೆರ್ಲ: ಉಕ್ಕಿನಡ್ಕ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಖಾಯಂ ಶಿಕ್ಷಕರನ್ನು ನೇಮಕಗೊಳಿಸಬೇಕೆಂದು ಆಗ್ರಹಿಸಿ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಉಕ್ಕಿನಡ್ಕ ಮೆಡಿಕಲ್ ಕಾಲೇಜು ಆವರಣದಲ್ಲಿ ನಿನ್ನೆ ಪ್ರತಿಭಟನೆ ನಡೆಸಲಾಯಿತು. ಯೂನಿಟ್ ಅಧ್ಯಕ್ಷ ನೇಹಾ ರೋಸ್ ಜಿಜೋ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಸ್ನೇಹಾ ಪಿ. ಸನಿಲ್, ಲಿಮಾ ವರ್ಗೀಸ್, ಫಾತಿಮಾ ನಿಹ್‌ಲತ್ ಮಾತನಾಡಿದರು.

ಭಾರತೀಯ ನರ್ಸಿಂಗ್ ಕೌನ್ಸಿಲ್ ಆದೇಶದಂತೆ ತಲಾ 10 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕನಿರಬೇಕಾಗಿದ್ದು, ಆದರೆ ಉಕ್ಕಿನಡ್ಕ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ 120 ವಿದ್ಯಾರ್ಥಿಗಳಿಗೆ ಇಬ್ಬರು ಖಾಯಂ ಶಿಕ್ಷಕರಿದ್ದು, 10 ಹುದ್ದೆ ಖಾಲಿ ಇವೆಯೆಂದು ವಿದ್ಯಾರ್ಥಿಗಳು ಆರೋಪಿಸಿದರು.

RELATED NEWS

You cannot copy contents of this page