ಖ್ಯಾತ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಆರೋಗ್ಯ ಸ್ಥಿತಿ ಗಂಭೀರ
ಕಲ್ಲಿಕೋಟೆ: ಖ್ಯಾತ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ರ ಆರೋಗ್ಯ ಸ್ಥಿತಿ ಗಂಭೀರವಾಗಿ ಮುಂದುವರಿಯು ತ್ತಿದೆ. ಕೆಲವು ದಿನಗಳ ಹಿಂದೆ ಅಸೌಖ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ ಎಂ.ಟಿ.ಯವರಿಗೆ ನಿನ್ನೆ ಹೃದಯಾಘಾತ ಉಂಟಾಗಿರು ವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇವರ ಆರೋಗ್ಯ ಸ್ಥಿತಿಬಗ್ಗೆ ಹೊಸ ಬುಲೆಟಿನ್ ಹೊರ ಬರಲಿದೆ. ಈಗ ಐಸಿಯುವಿನಲ್ಲಿ ಚಿಕಿತ್ಸೆಯಲ್ಲಿದ್ದಾರೆ. ೧೫ ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.