ತರೂರ್ ವಿರುದ್ಧ ಪ್ರಕರಣ ದಾಖಲು

ತಿರುವನಂತಪುರ: ತಿರುವನಂತಪುರ ಲೋಕಸಭಾ ಕ್ಷೇತ್ರ ಎನ್‌ಡಿಎ ಉಮೇದ್ವಾರ ಕೇಂದ್ರ ಸಚಿವ ರಾಜೀವ್ ಚಂದ್ರ ಶೇಖರನ್‌ರ ವಿರುದ್ಧ ಸುಳ್ಳು ಪ್ರಚಾರ ನಡೆಸಿದ ದೂರಿನಂತೆ ಇದೇ ಕ್ಷೇತ್ರದ ಕಾಂಗ್ರೆಸ್ ಉಮೇದ್ವಾರ ಶಶಿ ತರೂರ್‌ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಿವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಎನ್‌ಡಿಎ ಉಮೇದ್ವಾರ ರಾಜೀವ್ ಚಂದ್ರಶೇಖರನ್ ಮತ ಗಿಟ್ಟಿಸಲು ಹಣ ನೀಡುತ್ತಿದ್ದಾರೆಂದು ಶಶಿ ತರೂರ್ ಆರೋಪಿಸಿದ್ದರು. ಅದಕ್ಕೆ ಸಂಬಂಧಿಸಿ ಅವರ ವಿರುದ್ಧ ರಾಜೀವ್ ಚಂದ್ರಶೇಖರ್ ಪೊಲೀಸರಿಗೆ ದೂರು ನೀಡಿದ್ದರು.  ಅದರಂತೆ ತರೂರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

You cannot copy contents of this page