ಕಾಸರಗೋಡು: ತಮ್ಮ ಹಿತ್ತಿಲಿನ ತೆಂಗಿನ ಮರದಿಂದ ಕಾಯಿ ಕೊಯ್ಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ನೀಲೇಶ್ವರ ಪೇರೋಲ್‌ನ ದಿ| ಕುಂಞಿರಾಮನ್‌ರ ಪುತ್ರ ಎನ್.ವಿ. ರಾಜನ್ (56) ಸಾವನ್ನಪ್ಪಿದ ವ್ಯಕ್ತಿ. ಮೃತರು ಪತ್ನಿ ಶ್ಯಾಮಲ, ಮಕ್ಕಳಾದ ಬಾಬುರಾಜ್, ಸುಚಿತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.