ದೆಹಲಿ, ಉತ್ತರಾಖಂಡದಲ್ಲಿ ಮತ್ತೆ ಪ್ರಬಲ ಭೂಕಂಪ
ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿ ಮತ್ತು ಉತ್ತರಾಖಂಡ್ ಎಂಬೆಡೆಗಳಲ್ಲ್ಲಿ ಇಂದು ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ್ದು ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಎನ್.ಸಿ. ಪ್ರದೇಶ್ ನೋಯ್ಡ, ಗುರುಗ್ರಾಮ, ಗಾಜಿಯಾ ಬಾದ್ನಲ್ಲಿಯೂ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ೪.೨ ತೀವ್ರತೆ ದಾಖಲಿಸಲಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ದೆಹಲಿ ಹಾಗೂ ಸುತ್ತ ಮುತ್ತ ಪ್ರದೇಶಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ ಭೂಕಂಪ ಸಂಭವಿಸಿರುವುದು ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ಇನ್ನೊಂದೆಡೆ ಉತ್ತರಾಖಂ ಡ್ನ ಪಿಥೋರಗಢದಲ್ಲೂ ಇಂದು ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ ೪.೦ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಪಿಥೋರಗಢದಲ್ಲಿ ಇಂದು ಬೆಳಿಗ್ಗೆ ೯.೧೧ಕ್ಕೆ ಭೂಮಿಯ ಮೇಲ್ಮೈ ಯಿಂದ ೫ ಕಿಲೋ ಮೀಟರ್ ಆಳದಲ್ಲಿ ೪.೦ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪ ಶಾಸ್ತ್ರಕೇಂದ್ರ ತಿಳಿಸಿದೆ.
ಭೂಕಂಪದಿಂದಾಗಿ ಸಾವುನೋ ವಿನ ಬಗ್ಗೆ ಇನ್ನೂ ಯಾವುದೇ ವರದಿ ಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.