ದೇವಿಪ್ರಸಾದ್ ಮಾವೆ ಆಸ್ಪತ್ರೆಯಲ್ಲಿ ಮೊಣಗಂಟಿನ ಮರುಜೋಡಣಾ ಶಸ್ತ್ರಚಿಕಿತ್ಸೆ ಯಶಸ್ವಿ

ಉಪ್ಪಳ: ಮಂಜೇಶ್ವರ ತಾಲೂಕಿನಲ್ಲಿ ಪ್ರಥಮ ಬಾರಿಗೆ  ಉಪ್ಪಳ ದೇವಿಪ್ರಸಾದ್ ಮಾವೆ ಆಸ್ಪತ್ರೆಯಲ್ಲಿ ಕಾಲಿನ ಮೊಣಗಂಟಿನ ಮರು ಜೋಡಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ| ಶ್ರೀಧರ ಭಟ್ ತಿಳಿಸಿದ್ದಾರೆ. ಆಸ್ಪತ್ರೆಯ ಎಲುಬು ತಜ್ಞರ ನೇತೃತ್ವದಲ್ಲಿ ನಡೆಸಿದ ಈ ಶಸ್ತ್ರಚಿಕಿತ್ಸೆಯಲ್ಲಿ ಮಹಿಳೆಯ ಮೊಣಗಂಟಿನ ಮರುಜೋಡಣೆ ನಡೆಸಲಾಗಿದೆ. ಎಲುಬಿಗೆ ಸಂಬಂಧಿಸಿದ ಹಾಗೂ ಮೂಳೆ ಶಸ್ತ್ರಚಿಕಿತ್ಸೆಗೆ ದೇವಿಪ್ರಸಾದ್ ಆಸ್ಪತ್ರೆಯಲ್ಲಿ ಎಲ್ಲಾ ಸೌಕರ್ಯ ಏರ್ಪಡಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page