ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ತಾತನ ಬಂಧನ
ಕಾಸರಗೋಡು: ಪುತ್ರನ ನಾಲ್ಕು ವರ್ಷ ಪ್ರಾಯದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾತನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಗೊಳ ಪಟ್ಟ ಪ್ರದೇಶದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಬಾಲಕಿಯ ತಾತನ ವಿರುದ್ಧ ಬೇಕಲ ಪೊಲೀಸರು ಪೋಕ್ಸೋ ಕಾನೂನುಪ್ರಕಾರ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.