ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್: ದ್ವಿಚಕ್ರ ವಾಹನಗಳಿಗೆ ಢಿಕ್ಕಿ
ಕಾಸರಗೋಡು: ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಗೋಡೆಗೆ ಬಡಿದು ನಿಂತಿದೆ. ಚಾಲಕ ಸಣ್ಣ ಪುಟ್ಟ ಗಾಯ ಗೊಂಡಿದ್ದಾರೆ. ನಿನ್ನೆ ಬೆಳಿಗ್ಗೆ 11.30ರ ವೇಳೆ ಕಾಸರಗೋಡು ನಗರದ ಟ್ರಾಫಿಕ್ ಜಂಕ್ಷನ್ ಸಮೀಪ ಅಪಘಾತ ವುಂಟಾಗಿದೆ. ಚಟ್ಟಂಚಾಲ್ನಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಹಳೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿದ ಬಳಿಕ ಟ್ರಾಫಿಕ್ ಜಂಕ್ಷನ್ಗೆ ತಲುಪುವ ಮೊದಲೇ ಬ್ರೇಕ್ ಹಾನಿಗೀಡಾಗಿ ರುವುದು ಅಪಘಾತಕ್ಕೆ ಕಾರಣವಾಗಿದೆ. ಇದೇ ವೇಳೆ ಜಂಕ್ಷನ್ ದಾಟಿ ಮುಂದೆ ಸಾಗಿದ ಬಸ್ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಾಯಗೊಂಡ ಬಸ್ ಚಾಲಕ ಕಣ್ಣೂರು ನಿವಾಸಿ ಬಾಲಕೃಷ್ಣನ್ ರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.