ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಢಿಕ್ಕಿ
ಉಪ್ಪಳ: ನಿಯಂತ್ರಣ ತಪ್ಪಿದ ಬಸ್ ಡಿವೈಡ್ರ್ಗೆ ಢಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಳ ಹಿದಾಯತ್ ನಗರದಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ ಮಂಗಳೂರು ಭಾಗದಿಂದ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಪ್ರವೇಶಿಸುವವ ಸ್ಥಳದ ಅಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಇದರಿಂದ ಬಸ್ ಡಿವೈಡರ್ಗೆ ಢಿಕ್ಕಿ ಹೊಡೆದು ನಿಂತಿದೆ. ಈ ವೇಳೆ ಬಸ್ನಲ್ಲಿದ್ದ ಪ್ರಯಾಣಿಕರಾದ ಮೂರು ಮಂದಿಗೆ ಸಣ್ಣಪುಟ್ಟ ಗಾಯ ಉಂಟಾಗಿದೆಯೆಂದು ಹೇಳಲಾಗುತ್ತಿವೆ.