ನೆಲ್ಲಿಕುಂಜೆ ರೈಲು ಹಳಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

 ಕಾಸರಗೋಡು: ನಗರದ ನೆಲ್ಲಿಕುಂಜೆ ರೈಲ್ವೇ ಹಳಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ರೈಲುಗಾಡಿ ಢಿಕ್ಕಿ ಹೊಡೆದು ಇವರು ಸಾವನ್ನಪ್ಪಿರಬಹುದೆಂದು ಶಂಕಿಸಲಾ ಗುತ್ತಿದೆ. ಮೃತ ವ್ಯಕ್ತಿಗೆ ಸುಮಾರು ೫೩ ವರ್ಷ ಅಂದಾಜಿಸಲಾಗಿದೆ. ಕಾಸರಗೋಡು ಪೊಲೀಸರು ಘಟನೆ ನಡೆದ ಸ್ಥಳಕ್ಕಾಗಮಿಸಿ ಮಹಜರು ನಡೆಸಿದ ಬಳಿಕ ಮೃತದೇಹವನ್ನು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.

You cannot copy contents of this page