ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ಮನೆಯೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ
ಪೆರಿಯಾ ಮೂನಾಂಕಡವಿನ ಫಲ್ಗುಣನ್- ತಂಗಮಣಿ ದಂಪತಿ ಪುತ್ರಿ ಚಾಲಿಂಗಾಲ್ ಎಸ್.ಎನ್. ಕಾಲೇಜಿನ ತೃತೀಯ ವರ್ಷ ಪದವಿ ವಿದ್ಯಾರ್ಥಿನಿ ಅಮರ ಶಿವ (೧೯) ಎಂಬಾಕೆ ಸಾವನ್ನಪ್ಪಿದ ಯುವತಿ. ಈಕೆ ನಿನ್ನೆ ಮಧ್ಯಾಹ್ನ ತನ್ನ ಮನೆಯ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿಷಯ ತಿಳಿದ ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹದ ಮಹಜರು ನಡೆಸಿದ್ದಾರೆ. ನಂತರ ಮೃತದೇಹವನ್ನು ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಯಿತು. ಮೃತಳು ಹೆತ್ತವರ ಹೊರತಾಗಿ ಸಹೋದರ ಅಭಿಮನ್ಯು (ಗಲ್ಫ್) ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾಳೆ.