ನೇರಳಕಟ್ಟೆ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ: ದುರ್ವಾಸನೆಯಿಂದ ಸ್ಥಳೀಯರಿಗೆ ಸಮಸ್ಯೆ

ಬಾಯಾರು: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಬಾಯಾರು-ಕನಿಯಾಲ ರಸ್ತೆಯ ನೇರಳಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ತ್ಯಾಜ್ಯ ತಂದು ಉಪೇಕ್ಷಿಸುತ್ತಿರುವುದು ಸ್ಥಳೀಯರಿಗೆ ಸಮಸ್ಯೆಯಾಗಿದೆ. ವಿವಿಧ ಸಮಾರಂಭಗಳಲ್ಲಿ ಬಾಕಿಯಾದ ಆಹಾರ ಸಹಿತ ಪ್ಲೇಟ್‌ಗಳನ್ನು ರಾತ್ರಿ ಹೊತ್ತಿನಲ್ಲಿ ವಾಹನದಲ್ಲಿ ತಂದು  ಉಪೇಕ್ಷಿಸುತ್ತಿರುವುದಾಗಿ ದೂರಲಾಗಿದ. ಇದರ ದುರ್ವಾಸನೆಯಿಂದ ಪರಿಸರ ನಿವಾಸಿ ಹಾಗೂ ಪಾದಚಾರಿಗಳಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಸ್ಥಳೀಯರು ಪಂಚಾಯತ್‌ಗೆ ದೂರು ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

You cannot copy contents of this page