ಪತಿಯ ತಂದೆಯಿಂದ ಯುವತಿಗೆ ಕಿರುಕುಳ: ಐದು ಮಂದಿ ವಿರುದ್ಧ ಕೇಸು
ಕಾಸರಗೋಡು: ಪತಿಯ ತಂದೆ ದೌರ್ಜನ್ಯ ಗೈದಿರುವುದಾಗಿ ನೀಡಿದ ದೂರಿನಂತೆ ಬೇಕಲ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪತಿ, ಅತ್ತೆ, ಪತಿಯ ಸಹೋದರ, ಪತಿಯ ಸಹೋದರಿಯ ಪತಿ ಎಂಬಿವರ ವಿರುದ್ಧ ಗೃಹ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಿಸಲಾಗಿದೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ 35ರ ಹರೆಯದ ಯುವತಿ ನೀಡಿದ ದೂರಿನಂತೆ ಕೇಸು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಯುವತಿಯ ಪತಿ ಹಾಗೂ ಸಂಬಂಧಿಕರು ಕಾಞಂಗಾಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸು ವವರಾಗಿದ್ದಾರೆ.
2010ರಿಂದ 2021ರವರೆಗಿನ ಕಾಲಾವಧಿಯಲ್ಲಿ ತನಗೆ ಮಾನಸಿಕವಾಗಿ, ಶಾರೀರಿಕವಾಗಿ ಕಿರುಕುಳ ನೀಡಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.