ಪತ್ನಿಗೆ ಇರಿದು ಗಾಯಗೊಳಿಸಿದ ಪತಿ
ಕಾಸರಗೋಡು: ಪತಿ ಪತ್ನಿಗೆ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಮೇಲ್ಪರಂಬ ಪೊಲೀಸ್ ಠಾಣೆ ವ್ಯಾಪ್ತಿಯ ಚಟ್ಟಂಚಾಲ್ ಬೆಂಡಿಚ್ಚಾಲ್ನ ತಂಸೀನ (30) ಇರಿತದಿಂದ ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಬೆಳಿಗ್ಗೆ ಈ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ತಲುಪಿದ ಪೊಲೀಸರು ಯುವತಿಯ ಪತಿ ಇಸ್ಮಾಯಿಲ್ನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆಕ್ರಮಣಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.