ಬದಿಯಡ್ಕ: ಕೃಷಿ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿ ಭಾರತ ಸರಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಸತ್ಯನಾರಾಯಣ ಬೆಳೇರಿ ಅವರನ್ನು ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಶ್ರೀ ಕ್ಷೇತ್ರದ ರಾಜಗೋಪುರದ ಶಿಲಾನ್ಯಾಸ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸನ್ಮಾನಿಸಿದರು. ಜೀರ್ಣೋದ್ಧಾರ ಸಮಿತಿಯ ರಕ್ಷಾಧಿಕಾರಿ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸಿದ್ದು, ಹಲವರು ಉಪಸ್ಥಿತರಿದ್ದರು.