ಪುತ್ತೂರು: ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ಸಿ.ಎಂ ಸಿದ್ಧರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಶಾಸಕ ಅಶೋಕ್ ರೈ ಈ ಬಗ್ಗೆ ಪ್ರಯತ್ನಿಸಿದ್ದು, ಅವರ ಕಾರ್ಯಕ್ಕೆ ಯಶಸ್ವಿ ಲಭಿಸಿದೆ. ಈಗ ಇರುವ ನೂರು ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮ ಕೈಗೊಳ್ಳುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ.