ಪೊಲೀಸ್ ಠಾಣೆಯಲ್ಲಿ ಕುಡಿದು ಗಲಾಟೆ: ನಟ ವಿನಾಯಕನ್ ಸೆರೆ
ಕೊಚ್ಚಿ: ಕುಡಿದ ಮತ್ತಿನಲ್ಲಿ ಎರ್ನಾಕುಳಂ ಟೌನ್ ನೋರ್ತ್ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ ಆರೋಪದಂತೆ ಮಲಯಾಳಂ ಸಿನೆಮಾನಟ ವಿನಾಯಕನ್‌ರನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಸಂಜೆ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ ಬಗ್ಗೆ ವಿನಾಯಕ್‌ರ ಪತ್ನಿ ನೀಡಿದ ದೂರಿನಂತೆ ವಿನಾಯಕನ್ ಹಾಗೂ ಪೊಲೀಸರು ಠಾಣೆಗೆ ಕರೆಸಿದ್ದರು. ಅದರಂತೆ ವರು ಪೊಲೀಸ್ ಠಾಣೆಗೆ ಹೋಗಿದ್ದರು. ಆಗ ಮದ್ಯದ ಅಮಲಿನಲ್ಲಿದ್ದ ವಿನಾಯಕನ್ ಪೊಲೀಸರಲ್ಲಿ ವಾಗ್ವಾದಕ್ಕಿಳಿದು ಗಲಾಟೆಗೆ ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಅದಕ್ಕೆ ಸಂಬಂಧಿಸಿ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ನಂತರ ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಳಿಸ ಲಾಯಿತೆಂದು ಪೊಲೀಸರು ತಿಳಿಸಿದ್ದಾರೆ.