ಪೋಕ್ಸೋ ಪ್ರಕರಣ : ಆರೋಪಿಗೆ ಸಜೆ, ಜುಲ್ಮಾನೆ

ಕಾಸರಗೋಡು: ಪ್ರಾಯ ಪೂರ್ತಿಯಾಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋ ಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯ (ಪೋಕ್ಸೋ)ದ ನ್ಯಾಯಾಧೀಶರಾದ ಸಿ. ದೀಪು ಅವರು 13 ವರ್ಷ ಸಜೆ ಮತ್ತು 65,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.

ಉಳಿಯತ್ತಡ್ಕ ಎಸ್‌ಪಿ ನಗರದ ಅಬ್ಬಾಸ್ (63) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿ ದ್ದಲ್ಲಿ ಆರೋಪಿ 13 ತಿಂಗ ಳ ಹೆಚ್ಚುವರಿ ಸಜೆ ಅನುಭವಿಸಬೇಕಾ ಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

2021 ಜುಲೈ ತಿಂಗಳಲ್ಲಿ ಬಾಲಕಿಯೋರ್ವೆಗೆ ಬೆದರಿಕೆಯೊಡ್ಡಿ ನಿರ್ಮಾಣ ಹಂತದಲ್ಲಿರುವ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಕಾಸರಗೋಡು ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.  ಪ್ರೋಸಿಕ್ಯೂಶನ್ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ (ಪೋಕ್ಸೋ) ಸಿ.ಕೆ. ಪ್ರಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.

RELATED NEWS

You cannot copy contents of this page