ಪೋಕ್ಸೋ ಪ್ರಕರಣ ಆರೋಪಿಗೆ ಸಜೆ, ಜುಲ್ಮಾನೆ
ಕಾಸರಗೋಡು: ಪ್ರಾಯ ಪೂರ್ತಿಯಾಗದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಮದ ಆರೋಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶರಾದ ಸಿ. ದೀಪು ಒಂದು ವರ್ಷ ಕಠಿಣ ಸಜೆ, ಮೂರು ವರ್ಷಗಳ ಸಾದಾ ಸಜೆ ಹಾಗೂ ೩೦,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮಧೂರು ಉಳಿಯತ್ತಡ್ಕ ವಾಸುದೇವ ಗmಟ್ಟಿ (೫೨) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
೨೦೨೧ ಜೂನ್ನಲ್ಲಿ ಬಾಲಕಿಗೆ ಆರೋಪಿಯ ಅಂಗಡಿಗೆ ಸಾಮಗ್ರಿ ಖರೀದಿಸಲೆಂದು ಬಂದ ವೇಳೆ ಆಕೆಗೆ ಕಿರುಕುಳ ನೀಡಿರುವುದಾಗಿ ಆರೋಪಿ ಆಕೆ ನೀಡಿದ ದೂರಿನಂತೆ ಕಾಸರಗೋಡು ಮಹಿಳಾ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಆರೋಪಿಗೆ ಈ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಷನ್ ಪರವಾಗಿ ಸ್ಪೆಷಲ್ ಪ್ರೋಸಿಕ್ಯೂಟರ್ (ಪೋಕ್ಸೋ) ಎ.ಕೆ. ಪ್ರಿಯಾ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.